Web Analytics Made Easy - Statcounter

See also ebooksgratis.com: no banners, no cookies, totally FREE.

CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ನೇಪಾಳ - Wikipedia

ನೇಪಾಳ

From Wikipedia

नेपाल अधिराज्य
ನೇಪಾಲ್ ಅಧಿರಾಜ್ಯ್

ನೇಪಾಳ ರಾಜ್ಯ
ನೇಪಾಳ ದೇಶದ ಧ್ವಜ ನೇಪಾಳ ದೇಶದ ಚಿಹ್ನೆ
ಧ್ವಜ ಚಿಹ್ನೆ
ಧ್ಯೇಯ: (ಸಂಸ್ಕೃತ) जननी जन्मभूमिष्च स्वर्गादपि गरीयसी
ಜನನಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತ ಮೇಲು
ರಾಷ್ಟ್ರಗೀತೆ: ರಾಷ್ಟ್ರೀಯ ಗಾನ್

Location of ನೇಪಾಳ

ರಾಜಧಾನಿ ಕಟ್ಮಂಡು
27°42′N 85°19′E
ಅತ್ಯಂತ ದೊಡ್ಡ ನಗರ ಕಟ್ಮಂಡು
ಅಧಿಕೃತ ಭಾಷೆ(ಗಳು) ನೇಪಾಳಿ ಭಾಷೆ
ಸರಕಾರ ಹಂಗಾಮಿ ಸರ್ಕಾರ
 - ಮಹಾರಾಜ ಗ್ಯಾನೇಂದ್ರ ಬೀರ್ ಬಿಕ್ರಂ ಶಾ ದೇವ್
 - ಪ್ರಧಾನ ಮಂತ್ರಿ ಗಿರಿಜಾ ಪ್ರಸಾದ್ ಕೊಯ್ರಾಲ
ಏಕೀಕರಣ ಡಿಸೆಂಬರ್ ೨೧, ೧೭೬೮ 
ವಿಸ್ತೀರ್ಣ  
 - ಒಟ್ಟು ವಿಸ್ತೀರ್ಣ 147,181 ಚದುರ ಕಿಮಿ ;  (93rd)
  56,827 ಚದುರ ಮೈಲಿ 
 - ನೀರು (%) ೨.೮
ಜನಸಂಖ್ಯೆ  
 - ೨೦೦೫ರ ಅಂದಾಜು 27,133,000 (೪೨ನೇ)
 - ೨೦೦೨ರ ಜನಗಣತಿ 23,151,423
 - ಸಾಂದ್ರತೆ ೧೮೪ /ಚದುರ ಕಿಮಿ ;  ({{{population_density_rank}}})
೪೭೭

population_density_rank = ೫೬ನೇ /ಚದುರ ಮೈಲಿ 

ರಾಷ್ಟ್ರೀಯ ಉತ್ಪನ್ನ (PPP) ೨೦೦೫ರ ಅಂದಾಜು
 - ಒಟ್ಟು $39.14 billion (೮೭ನೇ)
 - ತಲಾ $1,675 (153rd)
ಮಾನವ ಅಭಿವೃದ್ಧಿ
ಸೂಚಿಕ
(೨೦೦೩)
0.526 (136th) – ಮಧ್ಯಮ
ಕರೆನ್ಸಿ ನೇಪಾಳಿ ರುಪಾಯಿ (NPR)
ಕಾಲಮಾನ NPT (UTC+5:45)
 - Summer (DST) not observed (UTC+5:45)
ಅಂತರ್ಜಾಲ TLD .np
ದೂರವಾಣಿ ಕೋಡ್ +977

ನೇಪಾಳವು ದಕ್ಷಿಣ ಏಷ್ಯಾದ ಒಂದು ರಾಷ್ಟ್ರ. ಹಿಮಾಲಯದ ತಪ್ಪಲಲ್ಲಿ ಇರುವ ನೇಪಾಳವು ಸುತ್ತಲೂ ಭೂಪ್ರದೇಶಗಳಿಂದ ಆವೃತವಾಗಿದೆ. ನೇಪಾಳದ ಉತ್ತರಕ್ಕೆ ಟಿಬೆಟ್ ಮತ್ತು ಇತರ ಎಲ್ಲಾ ದಿಕ್ಕುಗಳಲ್ಲಿಯೂ ಭಾರತವಿದೆ. ಎವರೆಸ್ಟ್ ಸೇರಿದಂತೆ ವಿಶ್ವದ ಅತಿ ಉನ್ನತ ೧೦ ಪರ್ವತ ಶಿಖರಗಳ ಪೈಕಿ ೮ ನೇಪಾಳದಲ್ಲಿಯೇ ಇವೆ. ನೇಪಾಳದ ವಿಸ್ತೀರ್ಣ ೧೪೧,೭೦೦ ಚ.ಕಿ.ಮೀ. ಜನಸಂಖ್ಯೆ ಸುಮಾರು ೨.೭ ಕೋಟಿ. ರಾಷ್ಟ್ರದ ರಾಜಧಾನಿ ಕಾಠ್ಮಂಡು.

ಪರಿವಿಡಿ

[ಬದಲಾಯಿಸಿ] ಇತಿಹಾಸ

ಕ್ರಿ.ಪೂ.೬ ಮತ್ತು ೫ನಯೆ ಶತಮಾನದಲ್ಲಿ ಈ ಪ್ರದೇಶವು ಶಾಕ್ಯ ಆಡಳಿತಕ್ಕೊಳಪಟ್ಟಿತ್ಥು. ಶಾಕ್ಯ ರಾಜಕುಮಾರರಲ್ಲೊಬ್ಬನಾದ ಸಿದ್ಧಾರ್ಥ ಗೌತಮನು ಐಹಿಕ ಪ್ರಾಪಂಚಿಕ ವ್ಯಾಮೋಹಗಳನ್ನು ತೊರೆದು ದಿವ್ಯ ಜ್ಞಾನವನ್ನು ಹೊಂದಿ ಮುಂದೆ ಬುದ್ಧನೆನಿಸಿಕೊಂಡನು. ಸುಮಾರು ಕ್ರಿ.ಪೂ. ೨೫೦ರ ಸಮಯಕ್ಕೆ ಈ ಪ್ರದೇಶವು ಉತ್ತರಭಾರತದ ಮೌರ್ಯ ಸಾಮ್ರಾಜ್ಯದ ಅಂಗವಾಗಿತ್ತು. ತರುವಾಯ ಗುಪ್ತ ಸಾಮ್ರಾಟರು , ಲಿಚ್ಛವಿ ಸಾಮ್ರಾಟರು ಹಾಗೂ ಚಾಲುಕ್ಯರು ಈ ಪ್ರದೇಶದ ಮೇಲೆ ಹತೋಟಿ ಸಾಧಿಸಿದ್ದರು. ನಂತರ ಈ ಪ್ರದೇಶವು ಹಲವು ಸಣ್ಣ ಅರಸೊತ್ತಿಗೆಗಳಾಗಿ ಹಂಚಿಹೋಯಿತು. ೧೭೬೫ರಲ್ಲಿ ಪೃಥ್ವಿನಾರಾಯಣ ಶಹ ಎಂಬ ಗೂರ್ಖಾ ಅರಸನು ನೇಪಾಳವನ್ನು ಒಂದುಗೂಡಿಸಿದನು. ಭಾರತವು ಬ್ರಿಟಿಷ್ ಆಡಳಿತಕ್ಕೆ ಒಳಗಾದಾಗ ನೇಪಾಳವು ತನ್ನ ಸ್ವಾಯತ್ತತೆಯನ್ನು ಉಳಿಸಿಕೊಂಡಿತ್ತು. ಆಂಗ್ಲರೊಡನೆ ನಡೆದ ಒಂದು ಯುದ್ಧದಲ್ಲಿ ನೇಪಾಳವು ಸೋಲನುಭವಿಸಿತಾದರೂ, ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಬ್ರಿಟಿಷರೊಂದಿಗೆ ಸಂಧಿ ಮಾಡಿಕೊಂಡಿತು. ಇದರ ಪ್ರಕಾರ ನೇಪಾಳವು ತನ್ನ ಪ್ರದೇಶಗಳಾಗಿದ್ದ ಉತ್ತರಾಖಂಡ , ಹಿಮಾಚಲ ಪ್ರದೇಶ ಮತ್ತು ಸಿಕ್ಕಿಂ ಭಾಗಗಳನ್ನು ಆಂಗ್ಲರಿಗೆ ಬಿಟ್ಟುಕೊಟ್ಟಿತು. ಅಲ್ಲಿಂದ ಮುಂದೆ ಇತ್ತೀಚಿನವರೆವಿಗೂ ನೇಪಾಳವು ಅರಸೊತ್ತಿಗೆಯಾಗಿಯೇ ಉಳಿದಿತ್ತು. ಈಚಿನ ದಿನಗಳಲ್ಲಿ ಪ್ರಜಾಸತ್ತೆಗಾಗಿ ಹೋರಾಟವು ತೀವ್ರಗೊಂಡು ಬಹುಪಕ್ಷೀಯ ಸಂಸದ್ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು. ಅರಸರ ಅಧಿಕಾರಗಳನ್ನು ಬಹುಮಟ್ಟಿಗೆ ಮೊಟಕುಗೊಳಿಸಲಾಯಿತು. ೧೯೯೧ರಲ್ಲಿ ಪ್ರಪ್ರಥಮ ಬಹುಪಕ್ಷೀಯ ಹಾಗೂ ಮುಕ್ತ ಚುನಾವಣೆಗಳು ನಡೆದವು.

[ಬದಲಾಯಿಸಿ] ಭೌಗೋಳಿಕ ಲಕ್ಷಣ

ನೇಪಾಳವು ಸುಮಾರು ೮೦೦ ಕಿ.ಮೀ. ಉದ್ದ ಹಾಗೂ ೨೦೦ ಕಿ.ಮೀ. ಅಗಲದ ಪಟ್ಟಿಯಂತೆ ಕಾಣುವುದು. ಭೌಗೋಳಿಕವಾಗಿ ದೇಶವನ್ನು ಉನ್ನತ ಪರ್ವತ ಪ್ರದೇಶ, ಬೆಟ್ಟಗುಡ್ಡಗಳ ಪ್ರದೇಶ ಹಾಗೂ ತರಾಯ್ ಪ್ರದೇಶಗಳೆಂದು ವಿಂಗಡಿಸಬಹುದು. ಭಾರತದ ಗಡಿಗೆ ಹೊಂದಿಕೊಂಡಿರುವ ಪ್ರದೇಶವು ಗಂಗಾ ಬಯಲಿನ ಒಂದು ಭಾಗವಾಗಿದೆ. ಈ ಭಾಗಕ್ಕೆ ಕೋಸಿ, ನಾರಾಯಣಿ (ಗಂಡಕಿ) ಮತ್ತು ಕರ್ನಾಲಿ ನದಿಗಳು ನೀರುಣಿಸುತ್ತವೆ. ಬೆಟ್ಟಗುಡ್ಡಗಳ ಪ್ರದೇಶವು ಕಾಠ್ಮಂಡು ಕಣಿವೆಯನ್ನು ಒಳಗೊಂಡಿದೆ. ದೇಶದ ಹೆಚ್ಚಿನ ಜನವಸತಿ ಇಲ್ಲಿಯೇ ಕಂಡುಬರುವುದು. ಈ ಪ್ರದೇಶದಲ್ಲಿ ಮಹಾಭಾರತ ಲೇಖ್ ಮತ್ತು ಶಿವಾಲಿಕ ಪರ್ವತಶ್ರೇಣಿಗಳು ಇವೆ. ಈ ಶ್ರೇಣಿಗಳು ಮಧ್ಯಮ ಮಟ್ಟದವಾಗಿದ್ದು ಸರಾಸರಿ ೧೦೦೦ದಿಂದ ೪೦೦೦ ಮೀ. ವರೆಗೆ ಎತ್ತರವುಳ್ಳವಾಗಿವೆ. ಹಿಮಾಲಯದ ಉನ್ನತ ಪರ್ವತ ಪ್ರದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಎತ್ತರದ ಪ್ರದೇಶವಾಗಿದೆ. ಎವರೆಸ್ಟ್ , ಕಾಂಚನಗಂಗಾ, ಅನ್ನಪೂರ್ಣಾ , ಮಕಾಲು , ಧವಳಗಿರಿ ಸೇರಿದಂತೆ ವಿಶ್ವದ ಹಲವು ಅತ್ಯುನ್ನತ ಶಿಖರಗಳು ಈ ವಿಭಾಗದಲ್ಲಿ ಇವೆ. ಅರಣ್ಯನಾಶ ದೇಶದ ಎಲ್ಲಕಡೆ ಅವಿರತವಾಗಿ ಸಾಗಿದ್ದು ಇದು ಪ್ರಕೃತಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ.

[ಬದಲಾಯಿಸಿ] ಅರ್ಥವ್ಯವಸ್ಥೆ

ನೇಪಾಳವು ಕೃಷಿಪ್ರಧಾನ ದೇಶ. ದೇಶದ ೭೬% ಜನರು ಜೀವನಕ್ಕಾಗಿ ವ್ಯವಸಾಯವನ್ನೇ ಅವಲಂಬಿಸಿದ್ದಾರೆ. ಬತ್ತ, ಗೋಧಿ, ಕಬ್ಬು ಮತ್ತು ಸೆಣಬು ಮುಖ್ಯ ಬೆಳೆಗಳು. ಕೈಗಾರಿಕೆಗಳು ಕೃಷಿ ಉತ್ಪನ್ನಗಳನ್ನು ಸಂಸ್ಕರಿಸುವುದಕ್ಕೇ ಸೀಮಿತ. ಪ್ರವಾಸೋದ್ಯಮವು ದೇಶದ ಪ್ರಮುಖ ಆರ್ಥಿಕ ಚಟುವಟಿಕೆ. ನೇಪಾಳದ ಹೆಚ್ಚಿನ ಭಾಗವು ಪರ್ವತಪ್ರಾಂತ್ಯವಾಗಿರುವುದರಿಂದ ರಸ್ತೆ ಹಾಗೂ ರೈಲುಮಾರ್ಗಗಳ ನಿರ್ಮಾಣ ಕಠಿಣ ಮತ್ತು ಅತಿ ವೆಚ್ಚವುಂಟುಮಾಡುವುದಾಗಿದೆ. ೨೦೦೩ರಂತೆ ದೇಶದಲ್ಲಿ ಒಟ್ಟು ೮೫೦೦ ಕಿ.ಮೀ. ಉತ್ತಮ ರಸ್ತೆಗಳು ಹಾಗೂ ಕೇವಲ ೫೯ ಕಿ.ಮೀ. ರೈಲುಮಾರ್ಗವಿದ್ದಿತು. ಇದರಿಂದಾಗಿ ರಾಷ್ಟ್ರದ ಆರ್ಥಿಕ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ದೂರಸಂಪರ್ಕ ವ್ಯವಸ್ಥೆಯು ಬಹಳ ಕೆಳಸ್ತರದ್ದಾಗಿದೆ. ಆಧುನಿಕ ತಂತ್ರಜ್ಞಾನವು ದೇಶದ ಜನತೆಯನ್ನು ತಲುಪಿಲ್ಲ. ನೇಪಾಳವು ಹೊರರಾಷ್ಟ್ರಗಳ ಸಹಾಯಧನವನ್ನು ಬಹುಮಟ್ಟಿಗೆ ಅವಲಂಬಿಸಿದೆ. ಭಾರತ, ಅಮೆರಿಕಾ, ಜಪಾನ್ , ಇಂಗ್ಲಂಡ್, ಯುರೋಪಿಯನ್ ಒಕ್ಕೂಟಗಳು ಪ್ರಮುಖ ದಾನಿಗಳು.

[ಬದಲಾಯಿಸಿ] ಇತರ ವಿಷಯಗಳು

ನೇಪಾಳವು ವಿಶ್ವದ ಏಕೈಕ ಹಿಂದೂ ರಾಷ್ಟ್ರ. ದೇಶದ ಅಧಿಕೃತ ಭಾಷೆ ನೇಪಾಲಿ. ಉಳಿದಂತೆ ಮೈಥಿಲಿ, ಭೋಜಪುರಿ ಮತ್ತು ಅವಧಿ ಭಾಷೆಗಳು ನುಡಿಯಲ್ಪಡುತ್ತವೆ. ನೇಪಾಳದಲ್ಲಿ ಪುರುಷರ ಸರಾಸರಿ ಆಯುರ್ಮಾನ ಮಹಿಳೆಯರಿಗಿಂತ ಹೆಚ್ಚು. ಇಡೀ ಪ್ರಪಂಚದಲ್ಲಿ ನೇಪಾಳವೊಂದರಲ್ಲಿ ಮಾತ್ರ ಈ ವಿದ್ಯಮಾನ ಕಂಡುಬರುತ್ತದೆ. ಸಾಂಸ್ಕೃತಿಕ ವಿಷಯಗಳಲ್ಲಿ ನೇಪಾಳವು ಟಿಬೆಟ್ ಮತ್ತು ಭಾರತವನ್ನು ಹೋಲುತ್ತದೆ. ಉತ್ತರದ ಹಿಮಾಲಯ ಪ್ರದೇಶದಲ್ಲಿ ಟಿಬೆಟ್ ಸಂಸ್ಕೃತಿಯ ಛಾಪು ಕಂಡುಬರುವುದು. ಉಳಿದಂತೆ ಎಲ್ಲಾ ಕಡೆ ಹಿಂದೂ ಸಂಸ್ಕೃತಿಯ ಗಾಢ ಛಾಯೆ ಇದೆ. ನೇಪಾಳವು ಭಾರತವನ್ನು ಬಹಳವಾಗಿ ಅವಲಂಬಿಸಿದೆ. ಆರ್ಥಿಕ ಸಹಾಯ , ತಂತ್ರಜ್ಞಾನ, ರಕ್ಷಣೆ ಇವುಗಳೆಲ್ಲವೂ ಹೆಚ್ಚಿನ ಪ್ರಮಾಣದಲ್ಲಿ ಭಾರತದಿಂದಲೇ ನೇಪಾಳಕ್ಕೆ ಒದಗಿದೆ.

ಇತರ ಭಾಷೆಗಳು


aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -