ಬಳ್ಳಾರಿ
From Wikipedia
ಬಳ್ಳಾರಿ ಕರ್ನಾಟಕ ರಾಜ್ಯದ ಒಂದು ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ರಾಜಧಾನಿ.
ಪರಿವಿಡಿ |
[ಬದಲಾಯಿಸಿ] ಆಕರ್ಷಣೆಗಳು
ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಲ್ಲಿ ಹಂಪೆ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ.
[ಬದಲಾಯಿಸಿ] ಚರಿತ್ರೆ
ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.
[ಬದಲಾಯಿಸಿ] ಭೌಗೋಳಿಕ
ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ 8447 ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ.
ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ.
[ಬದಲಾಯಿಸಿ] ತಾಲೂಕುಗಳು
- ಬಳ್ಳಾರಿ
- ಹೂವಿನಹಡಗಲಿ
- ಹಗರಿಬೊಮ್ಮನಹಳ್ಳಿ
- ಕೂಡ್ಲಿಗಿ
- ಶಿರಗುಪ್ಪಾ
- ಹೊಸಪೇಟೆ
- ಸಂಡೂರು
[ಬದಲಾಯಿಸಿ] ಕೃಷಿ
ಕೃಷಿ ಬಳ್ಳಾರಿ ಜಿಲ್ಲೆಯ ಮುಖ್ಯ ವೃತ್ತಿ. ಕೃಷಿಗೆ ನೀರಿನ ಸರಬರಾಜು ತುಂಗಭದ್ರಾ ನದಿ ಮತ್ತು ಹೊಸಪೇಟೆಯಲ್ಲಿನ ತುಂಗಭದ್ರಾ ಅಣೆಕಟ್ಟಿನಿಂದ ಆಗುತ್ತದೆ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ಹತ್ತಿ, ಜೋಳ, ನೆಲಗಡಲೆ, ಭತ್ತ, ಸೂರ್ಯಕಾಂತಿ.
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ