ಸಿಂಧೂ ನದಿ
From Wikipedia
ಸಿಂಧೂ ನದಿ (ಆಂಗ್ಲ ಭಾಷೆ: ಇಂಡಸ್ ; ಟಿಬೆಟ್ ಭಾಷೆ: ಸೆಂಗೆ ಚೂ;) ಪಾಕಿಸ್ತಾನ ಮತ್ತು ಉತ್ತರ ಭಾರತದಲ್ಲಿ ಹರಿಯುವ ಒಂದು ಪ್ರಮುಖ ನದಿ. ಟಿಬೆಟ್ಟಿನ ಪ್ರಸ್ಥಭೂಮಿಯಲ್ಲಿರುವ ಮಾನಸ ಸರೋವರದ ಹತ್ತಿರ ಉಗಮಿಸುವ ಈ ನದಿ ಕಶ್ಮೀರದ ಮೂಲಕ ಉತ್ತರ ಪಾಕಿಸ್ತಾನಕ್ಕೆ ಹರಿದು, ನಂತರ ದಕ್ಷಿಣ ಮುಖಕ್ಕೆ ತಿರುಗಿ ಇಡಿ ಪಾಕಿಸ್ತಾನದ ಉದ್ದಕ್ಕೆ ಹರಿದು, ಕರಾಚಿ ನಗರದ ಬಳಿ ಅರಬ್ಬಿ ಸಮುದ್ರವನ್ನು ಸೇರುತ್ತದೆ.